Close Menu
New Karnataka
    What's Hot

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

      August 30, 2026

      ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

      August 29, 2026

      ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

      August 26, 2026

      ಎಂದೂ ಕುಗ್ಗದ ಬಿಸಿನೆಸ್‌: ಮಹಿಳೆಯರಿಗೆ ಹೆಚ್ಚು ಲಾಭ ತರುವ ‘ಟೈಲರಿಂಗ್ ಉದ್ಯಮ’

      August 23, 2026

      Xiaomi Redmi Note 17 5G ಬಿಡುಗಡೆ: 8,000mAh ಬ್ಯಾಟರಿ, ಬೆಲೆ ಮತ್ತು ಸಂಪೂರ್ಣ ವೈಶಿಷ್ಟ್ಯಗಳು

      August 20, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ರಜಿನಿಕಾಂತ್ 173 ನೇ ಚಿತ್ರಕ್ಕೆ ಕಮಲ್‌ ಹಾಸನ್ ನಿರ್ಮಾಪಕ; ಬಿಡುಗಡೆ ದಿನವೂ ಫಿಕ್ಷ್.
    Entertainment

    ರಜಿನಿಕಾಂತ್ 173 ನೇ ಚಿತ್ರಕ್ಕೆ ಕಮಲ್‌ ಹಾಸನ್ ನಿರ್ಮಾಪಕ; ಬಿಡುಗಡೆ ದಿನವೂ ಫಿಕ್ಷ್.

    New KarnatakaBy New KarnatakaNovember 5, 2025Updated:February 2, 20262 Mins Read
    Share WhatsApp Facebook Twitter LinkedIn Telegram Email
    Share
    WhatsApp Facebook Twitter LinkedIn Email

    ದಶಕಗಳ ಸ್ನೇಹ ಮತ್ತು ಸೌಹಾರ್ದತೆಯನ್ನು ಸಾರುತ್ತಾ, ತಮಿಳು ಚಿತ್ರರಂಗದ ಇಬ್ಬರು ಮಹಾನ್ ತಾರೆಗಳು ಒಂದಾಗಿದ್ದಾರೆ. ಸೂಪರ್‌ಸ್ಟಾರ್ ರಜನಿಕಾಂತ್ ಅವರ 173ನೇ ಚಿತ್ರವನ್ನು ಅವರ ಆತ್ಮೀಯ ಸ್ನೇಹಿತ, ನಟ ಕಮಲ್ ಹಾಸನ್ ಅವರು ತಮ್ಮ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್’ (RKFI) ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ. ಈ ಸುದ್ದಿ ಇಡೀ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ.

    ನಿರ್ದೇಶನದ ಜವಾಬ್ದಾರಿ ಸುಂದರ್ ಸಿ ಅವರಿಗೆ
    ಈ ಬಹುನಿರೀಕ್ಷಿತ ಚಿತ್ರಕ್ಕೆ ಜನಪ್ರಿಯ ನಿರ್ದೇಶಕ ಸುಂದರ್ ಸಿ ಆಕ್ಷನ್ ಕಟ್ ಹೇಳಲಿದ್ದಾರೆ. ಈ ಹಿಂದೆ ರಜನಿಕಾಂತ್ ಅವರ ಬ್ಲಾಕ್‌ಬಸ್ಟರ್ ಚಿತ್ರ ‘ಅರುಣಾಚಲಂ’ (1997) ಗೆ ಸುಂದರ್ ಸಿ ಸಹಾಯ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಈಗ ಅವರು ರಜನಿಕಾಂತ್ ಅವರ 173ನೇ ಚಿತ್ರಕ್ಕೆ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿರುವುದು ವಿಶೇಷ. ಸುಂದರ್ ಸಿ ಅವರ ಕಾಮಿಡಿ ಮತ್ತು ಆಕ್ಷನ್ ಮಿಶ್ರಿತ ಮನರಂಜನೆಯ ಚಿತ್ರಗಳಿಗಾಗಿ ಹೆಸರುವಾಸಿಯಾಗಿದ್ದಾರೆ.

    ಬಿಡುಗಡೆ ಯಾವಾಗ?
    #Thalaivar173 ಎಂದು ಕರೆಯಲ್ಪಡುವ ಈ ಚಿತ್ರವು 2027 ರ ಪೊಂಗಲ್ ಹಬ್ಬಕ್ಕೆ ವಿಶ್ವಾದ್ಯಂತ Grand ಆಗಿ ಬಿಡುಗಡೆಗೊಳ್ಳಲಿದೆ. ಚಿತ್ರದ ವಿತರಣೆಯನ್ನು ರೆಡ್ ಜೈಂಟ್ ಮೂವೀಸ್ (Red Giant Movies) ಸಂಸ್ಥೆ ವಹಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

    ಸ್ನೇಹಕ್ಕೆ ಸಾಕ್ಷಿಯಾದ ಮಹತ್ವದ ಮೈಲಿಗಲ್ಲು
    ಈ ಸಹಯೋಗವು ಕೇವಲ ಸಿನಿಮಾ ಮಾತ್ರವಲ್ಲ, ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರ ಐದು ದಶಕಗಳಿಗೂ ಹೆಚ್ಚು ಕಾಲದ ಸ್ನೇಹ ಮತ್ತು ಸಹೋದರತ್ವದ ಬಂಧವನ್ನು ಆಚರಿಸುತ್ತದೆ. ಈ ಬಗ್ಗೆ ಮಾತನಾಡಿದ ಕಮಲ್ ಹಾಸನ್, ತಮ್ಮ X (ಹಿಂದಿನ ಟ್ವಿಟರ್) ಖಾತೆಯಲ್ಲಿ, “ಗಾಳಿಯಂತೆ, ಮಳೆಯಂತೆ, ನದಿಯಂತೆ ಸುರಿಸೋಣ, ಸಂತೋಷಿಸೋಣ, ಬದುಕೋಣ! ರಾಜ್ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್ ನಿರ್ಮಾಣದಲ್ಲಿ ಸುಂದರ್ ಸಿ ನಿರ್ದೇಶನದಲ್ಲಿ ನನ್ನ ಆತ್ಮೀಯ ಸ್ನೇಹಿತ ಸೂಪರ್‌ಸ್ಟಾರ್ ರಜನಿಕಾಂತ್ ನಟಿಸುತ್ತಿರುವ #Thalaivar173 ಎಂಬ ಹ್ಯಾಷ್‌ಟ್ಯಾಗ್‌ ನಲ್ಲಿ ಬರೆದು ಸಂತಸ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಪ್ರಪಂಚದ ಮೂಲೆ ಮೂಲೆ ಪರಿಚಯಿಸುವ ಕನ್ನಡದ ಟಾಪ್‌ ಟ್ರಾವೆಲ್ Youtube ಚಾನೆಲ್‌ಗಳು

    ರಜನಿಕಾಂತ್ ಮತ್ತು ಕಮಲ್ ಹಾಸನ್ ಎಂಬ ಇಬ್ಬರೂ ತಮಿಳು ಚಿತ್ರರಂಗದ ಐತಿಹಾಸಿಕ ವ್ಯಕ್ತಿತ್ವಗಳು. ರಜನಿಕಾಂತ್‌ರ ‘ಜೈಲರ್ ೨’ ಚಿತ್ರದ ನಂತರ ಈ ಪ್ರಾಜೆಕ್ಟ್ ಅವರ ಹೊಸ ಸಾಹಸವಾಗಿದ್ದು, ಕಮಲ್ ಹಾಸನ್ ನಿರ್ಮಾಣದಲ್ಲಿ ಅಭಿನಯಿಸುವುದು ಇಬ್ಬರ ಸ್ನೇಹದ ಸಂಕೇತವಾಗಿದೆ.

    ಈ ಚಿತ್ರವು ದೊಡ್ಡ ಬಜೆಟ್‌ನೊಂದಿಗೆ ನಿರ್ಮಾಣಗೊಳ್ಳಲಿದ್ದು, ರಜನಿಕಾಂತ್‌ರ ಅದ್ಭುತ ಅಭಿನಯ ಮತ್ತು ಸುಂದರ್ ಸಿ ಅವರ ಕಾಮೆಡಿ-ಆಕ್ಷನ್ ಮಿಶ್ರಣದ ಶೈಲಿಯಿಂದ ದಕ್ಷಿಣ ಭಾರತದ ಚಿತ್ರರಂಗಕ್ಕೆ ಹೊಸ ಉತ್ಸಾಹವನ್ನು ತರಲಿದೆ ಎಂದು ಸಿನಿಮಾ ಪ್ರೇಮಿಗಳು ನಂಬಿಕೆ ವ್ಯಕ್ತಪಡಿಸಿದ್ದಾರೆ. ಪೊಂಗಲ್ 2027 ರಲ್ಲಿ ಬಿಡುಗಡೆಯಾಗುವ ಈ ಚಿತ್ರವು ಫ್ಯಾನ್‌ಗಳಿಗೆ ದೊಡ್ಡ ಗಿಫ್ಟ್‌ ಆಗಲಿದೆ ಎಂಬುದರಲ್ಲಿ ಸಂದೇಹವಿಲ್ಲ.

    ಈ ಅದ್ಧೂರಿ ಚಿತ್ರವು ಭಾರತೀಯ ಸಿನೆಮಾ ಇತಿಹಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದ್ದು, ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರ ಅಭಿಮಾನಿಗಳಿಗೆ ದೊಡ್ಡ ಹಬ್ಬವಾಗಲಿದೆ. ಚಿತ್ರದ ಪಾತ್ರವರ್ಗ ಮತ್ತು ಇತರ ತಾಂತ್ರಿಕ ತಂಡದ ವಿವರಗಳು ಶೀಘ್ರದಲ್ಲೇ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

    kamal hasan movie news in kannada rajinikanth movie ranjikanth movie update tamil movies thalaivar 173 thalaivar 173 updates
    Share. Facebook Twitter WhatsApp LinkedIn Email
    Previous Articleಸೈಬರ್‌ ವಂಚನೆಗಳಿಂದ ನಿಮ್ಮ ಹಣವನ್ನು ಕಾಪಾಡಿಕೊಳ್ಳಲು ಫೋನ್‌ಪೇಯಿಂದ ಹೊಸ ಭದ್ರತಾ ವ್ಯವಸ್ಥೆ- PhonePe Protect
    Next Article Apocalypto(2006); ಬೇಟೆಗಾರರೇ ಬೇಟೆಯಾದ ರೋಚಕ ಕಥೆಯುಳ್ಳ ಈ ಚಿತ್ರ ನೀವು ನೋಡಲೇಬೆಕು

    Related Posts

    Entertainment

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026
    Entertainment

    Toxic Trailer: ಯಶ್ ‘ಟಾಕ್ಸಿಕ್’ ಟ್ರೈಲರ್ ರಿಲೀಸ್! ಫ್ಯಾನ್ಸ್ ಹೇಳಿದ್ದೇನು?

    August 9, 2026
    Entertainment

    ಹಾಲಿವುಡ್‌ಗೆ ಸೆಡ್ಡು ಹೊಡೆಯುವಂತಿದೆ ‘ರಾಮಾಯಣ’ ಟ್ರೈಲರ್: ರಾವಣನ ಲುಕ್ ನೋಡಿ ಫ್ಯಾನ್ಸ್ ಫಿದಾ!

    July 30, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Our Picks

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.